ಮೇ 3ರಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯ ಪ್ರವಾಸ | Union Home Minister Amit Shah visits karnataka state on May 3


ಮೇ 3ರಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯ ಪ್ರವಾಸ

ಕೇಂದ್ರ ಗೃಹ ಸಚಿವ ಅಮಿತ್​ ಶಾ

ಬೆಂಗಳೂರು: ಮೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಗೆ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ನೃಪತುಂಗ ರಸ್ತೆಯಲ್ಲಿ ನೃಪತುಂಗ ವಿವಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದೇ ವೇಳೆ ಫಾರೆನ್ಸಿಕ್ ಸೈನ್ಸ್ ಲ್ಯಾಬ್​ನ್ನು ವರ್ಚುವಲ್ ಉದ್ಘಾಟನೆ ಮಾಡಲಿದ್ದು, ಬಳ್ಳಾರಿಯ ಫಾರೆನ್ಸಿಕ್ ಸೈನ್ಸ್ ಲ್ಯಾಬ್ ಸಹ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಾಟ್ ಗ್ರಿಡ್ ಮತ್ತು ಯಲಹಂಕ ಡಿಸಾಸ್ಟರ್ ರಿಕವರಿ ಸೆಂಟರ್​ನಲ್ಲಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2ಗಂಟೆಗೆ ಸಿಎಂ ಅಧಿಕೃತ ನಿವಾಸಕ್ಕೆ ಬರಲಿರುವ ಶಾ, ಸಿಎಂ ಅಧಿಕೃತ ನಿವಾಸದಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿದೆ.

ಸಂಜೆ 4 ಗಂಟೆಗೆ ಮಲ್ಲೇಶ್ವರಂ ಬಿಜೆಪಿ ರಾಜ್ಯ ಕಚೇರಿಗೆ ಭೇಟಿ ನೀಡಿ, ಸಂಜೆ 5.30ಕ್ಕೆ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್​ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ವಿಶೇಷ ವಿಮಾನದ ಮೂಲಕ ರಾತ್ರಿ 8.15ಕ್ಕೆ ಹೆಚ್​ಎಎಲ್​ ಏರ್​ಪೋರ್ಟ್​​ನಿಂದ ದೆಹಲಿಗೆ ತೆರಳಲಿದ್ದಾರೆ. ಇನ್ನೂ ಅದೇ ಮೇ 3ರಂದು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಶಾ ಭೇಟಿ ನೀಡಿವ ಸಾಧ್ಯತೆಯಿದ್ದು, ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದ್ರೆ ಅಮಿತ್ ಶಾ ಮಂಡ್ಯ ಭೇಟಿ ಇನ್ನೂ ನಿರ್ಧಾರವಾಗಿಲ್ಲ.

TV9 Kannada


Leave a Reply

Your email address will not be published. Required fields are marked *