ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದ್ದು, ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ. ಡಿಎಂಕೆ ನಾಯಕ ಎಂ.ಕೆ ಸ್ಟಾಲಿನ್  ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ.

ಮೇ 7ನೇ ತಾರೀಖಿನಂದು ಸಿಎಂ ಆಗಿ ಸ್ಟಾಲಿನ್ ಪ್ರಮಾಣ ವಚನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ಒಟ್ಟು 234 ಕ್ಷೇತ್ರಗಳಲ್ಲಿ ಡಿಎಂಕೆ 157 ಕ್ಷೇತ್ರಗಳಲ್ಲಿ ಗೆದ್ದು  ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗ್ತಿದೆ. ಇನ್ನು ಎಐಎಡಿಎಂಕೆ 75 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೆ, ಡಿಎಂಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಇನ್ನು ಸ್ಟಾಲಿನ ಪುತ್ರ ಉದಯಾನಿಧಿ ಸ್ಟಾಲಿನ್​ ಸಹ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ.

 

The post ಮೇ 7ಕ್ಕೆ ತಮಿಳುನಾಡು ಸಿಎಂ ಆಗಿ ಎಂ.ಕೆ ಸ್ಟಾಲಿನ್ ಪ್ರಮಾಣವಚನ appeared first on News First Kannada.

Source: newsfirstlive.com

Source link