ಮೈಸೂರಿಗೆ ಇಂದು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ಕೊಡಗಿನಲ್ಲಿ 2 ದಿನ ವಿಶ್ರಾಂತಿ | Sonia Gandhi and priyanka Gandhi to visit mysore today over bharat jodo yatra


ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಪಾದಯಾತ್ರೆ ಸದ್ಯ ಮೈಸೂರಿಗೆ ತಲುಪಿದ್ದು ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಮೈಸೂರಿಗೆ ಇಂದು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ಕೊಡಗಿನಲ್ಲಿ 2 ದಿನ ವಿಶ್ರಾಂತಿ

ಸೋನಿಯಾ ಗಾಂಧಿ

Image Credit source: Hindustan Times

ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಇಂದು ಮಧ್ಯಾಹ್ನದ ವೇಳೆಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ(Priyanka Gandhi) ಮೈಸೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸೋನಿಯಾ ಮತ್ತು ಪ್ರಿಯಾಂಕ ಆಗಮಿಸಲಿದ್ದಾರೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಪಾದಯಾತ್ರೆ ಸದ್ಯ ಮೈಸೂರಿಗೆ ತಲುಪಿದ್ದು ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಯಾತ್ರೆಯಲ್ಲಿ ಭಾಗಿಯಾಗುವ ಮುನ್ನ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವಿಮಾನ‌ ನಿಲ್ದಾಣದಿಂದ ನೇರವಾಗಿ ಚಾಮುಂಡಿ‌ಬೆಟ್ಟಕ್ಕೆ ತೆರಳುವ ಸಾಧ್ಯತೆ ಇದೆ. ನಂತರ ಮತ್ತೆ ಹೆಲಿಕಾಫ್ಟರ್ ಮೂಲಕ ಕೊಡಗಿಗೆ ತೆರಳಲಿದ್ದಾರೆ. ಕೊಡಗಿನಲ್ಲಿ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇನ್ನು ಸಂಜೆ ವೇಳೆಗೆ ರಾಹುಲ್ ಗಾಂಧಿ ಕೂಡ ಕೊಡಗಿಗೆ ಹೋಗಿ ಕುಟುಂಬದ ಜೊತೆ ಎರಡು ದಿನ‌ ವಿಶ್ರಾಂತಿ ಪಡೆಯಲಿದ್ದಾರೆ. ಅಕ್ಟೋಬರ್ 6 ರಂದು ಮಂಡ್ಯದಲ್ಲಿ ಐಕ್ಯತಾ ರಾಲಿಯಲ್ಲಿ ರಾಹುಲ್, ಪ್ರಿಯಾಂಕ ಭಾಗಿಯಾಗಲಿದ್ದಾರೆ. ಒಂದು ದಿನದ‌ ಪಾದಯಾತ್ರೆ ‌ನಂತರ ಪ್ರಿಯಾಂಕ ವಾಪಸ್ಸು ಕೊಡಗಿಗೆ ತೆರಳಲಿದ್ದಾರೆ.

TV9 Kannada


Leave a Reply

Your email address will not be published.