ಮೈಸೂರಿನಲ್ಲಿ ಭೀಕರ ಅಪಘಾತ: ಮೈಝುಂ ಎನಿಸುವಂತಿದೆ ಸಿಸಿಟಿವಿ ದೃಶ್ಯ

ಮೈಸೂರಿನಲ್ಲಿ ಭೀಕರ ಅಪಘಾತ: ಮೈಝುಂ ಎನಿಸುವಂತಿದೆ ಸಿಸಿಟಿವಿ ದೃಶ್ಯ

ಮೈಸೂರು: ಮೈಸೂರಿನಲ್ಲಿ ಆಟೋ, ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಸಯ್ಯಾಜಿರಾವ್​ ರಸ್ತೆಯಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೇಗವಾಗಿ ಬಂದ ಕಾರು ಆಟೋ ಮತ್ತು ಬೈಕ್​ಗೆ ಡಿಕ್ಕಿ ಹೊಡೆದಿದೆ. ಆಟೋಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೂ ಗಾಯಗಳಾಗಿದೆ.  ಈ ಕುರಿತು  ಎನ್​.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಮೈಸೂರಿನಲ್ಲಿ ಭೀಕರ ಅಪಘಾತ: ಮೈಝುಂ ಎನಿಸುವಂತಿದೆ ಸಿಸಿಟಿವಿ ದೃಶ್ಯ appeared first on News First Kannada.

Source: newsfirstlive.com

Source link