ಮೈಸೂರು: ವಾಟರ್ ಫಿಲ್ಟರ್ ಹೌಸ್‌ನಲ್ಲಿ ವಿಷಾನಿಲ ಸೋರಿಕೆಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದ್ದು, ಅನಿಲ ಸೋರಿಕೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಫಿಲ್ಟರ್ ಹೌಸ್ ಮುಂದಿನ ರಸ್ತೆ ಬಂದ್ ಮಾಡಿದ್ದಾರೆ. ಇತ್ತ ಅಗ್ನಿಶಾಮಕ ದಳದ ಸಿಬ್ಬಂದಿ ಅನಿಲ ಸೋರಿಕೆ ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ವಿಷ ಅನಿಲ ಸೇವಿಸಿ ಮೂವರು ಅಗ್ನಿಶಾಮಕ ದಳ ಸಿಬ್ಬಂದಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.