ವಿಜಯನಗರ: ಮೊಬೈಲ್ ಕೊಡಿಸಿಲ್ಲ ಅಂತಾ ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಸನ್ನಿಧಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಾಗರಾಜ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೋಷಕರು ಮೊಬೈಲ್ ಕೊಡಿಸಿಲ್ಲ ಅಂತ ಫೆಬ್ರವರಿ 16ರಂದು ಮನೆ ಬಿಟ್ಟು ಬಂದಿದ್ದ. ನಂತರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.