ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ರಿಂದ ಹಲ್ಲೆ ಆರೋಪಕ್ಕೆ ಸಂಬಂಧಿಸಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಗರಂ ಆಗಿದ್ದು ಪ್ರಕರಣದ ವರದಿ ಒಪ್ಪಿಸುವಂತೆ ತಿಳಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಮೊಹಮ್ಮದ ನಲಪಾಡ್ ಮತ್ತು ಬೆಂಬಲಿಗರು ಬಳ್ಳಾರಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೆಗೌಡ್ರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಊಹಾಪೋಹಗಳೆದ್ದಿವೆ. ಇದು ಕೆಪಿಸಿಸಿ ಅಧ್ಯಕ್ಷ ಡಾ. ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ನಾಯಕರಿಗೆ ಸಾಕಷ್ಟು ಮುಜುಗರ ತಂದೊಡ್ಡಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಕೈ ನಾಯಕರು ಕರ್ನಾಟಕ ಕೈ ಉಸ್ತುವಾರಿ ಆಗಿರುವ ರಂದೀಪ್ ಸುರ್ಜೆವಾಲರಿಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಗರಂ ಆದ ಸುರ್ಜೇವಾಲ ಪ್ರಕರಣದ ಸಂಪೂರ್ಣ ವರದಿ ಒಪ್ಪಿಸುವಂತೆ ಕೈ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ..
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನಲಪಾಡ್ ಗೆ ಕರೆ ಮಾಡಿದ್ದಾರೆ ಎನ್ನಲಾಗಿದ್ದು‘ನೀವು ಯುವ ಕಾಂಗ್ರೆಸ್ ಅಧ್ಯಕ್ಷನಾಗುವವನು, ಈ ರೀತಿ ರಂಪಾಟ ಸರಿ ಅಲ್ಲ. ಜೊತೆಗೆ ಪ್ರಕರಣ ದೊಡ್ಡದು ಮಾಡೋದು ಬೇಡ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.