ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಮಹತ್ವದ ನಿರ್ಧಾರವನ್ನ ಪ್ರಕಟಿಸಿದೆ. ರೈತರಿಂದ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನ ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ.
ದೇಶವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ.. ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ದೇಶದ ಕೃಷಿ ಹಿತದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ, ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೇವು. ಆದರೆ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಲು ಬಯಸುತ್ತೇನೆ ಎಂದರು.
ಯಾವುದು ನೂತನ ಕೃಷಿ ಕಾಯ್ದೆಗಳು…?
- ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020
- ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020
- ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020