ಮೌಢ್ಯಕ್ಕೆ ಸೆಡ್ಡು ಹೊಡೆದು ಚಾಮರಾಜನಗರಕ್ಕೆ ಬಂದ CM ಬೊಮ್ಮಾಯಿಗೆ ಅದ್ದೂರಿ ಸ್ವಾಗತ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮೌಢ್ಯ ತೊರೆದು ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಅನ್ನೋ ನಂಬಿಕೆ ಹಲವು ರಾಜಕಾರಣಿಗಳಲ್ಲಿದೆ. ಹೀಗಿರುವಾಗ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಬೊಮ್ಮಾಯಿ ಚಾಮರಾಜನಗರಕ್ಕೆ ಹೋಗ್ತಾರಾ ಅನ್ನೋ ಪ್ರಶ್ನೆ ಎದ್ದಿತ್ತು.

ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಬೊಮ್ಮಾಯಿ ಚಾಮರಾಜನಗರಕ್ಕೆ ಆಗಮಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಭಾಗಿಯಾಗಲಿದ್ದಾರೆ.

ಇನ್ನು ಸಿಎಂ ಚಾಮರಾಜನಗರದ ಟೋಲ್ ಗೇಟ್ ಬಳಿ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಿಎಂಗೆ ಅದ್ದೂರಿ ಸ್ವಾಗತ ಕೋರಿದರು. ಮೂಢನಂಬಿಕೆಗೆ ಸೆಡ್ಡು ಹೊಡೆದು ಚಾಮರಾಜನಗರಕ್ಕೆ ಭೇಟಿ ನೀಡಿದ ನಾಲ್ಕನೇ ಮುಖ್ಯಮಂತ್ರಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾದರು. ಈ ಮೊದಲು ಹೆಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಭೇಟಿ ನೀಡಿದ್ದರು. ಇನ್ನು ಸಿಎಂ ಚಾಮರಾಜನಗರ ಪಟ್ಟಣಕ್ಕೆ ಆಗಮಿಸದೇ ಬೈಪಾಸ್ ಮೂಲಕ ಸಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ತೆರಳಿದ್ದಾರೆ.

News First Live Kannada

Leave a comment

Your email address will not be published. Required fields are marked *