ನವದೆಹಲಿ: ಕೊರೊನಾ ಸಂಕಷ್ಟದ ಸಮಯದಲ್ಲಿ ತಮ್ಮ ತಂದೆ-ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಿ, ಪ್ರತಿ ತಿಂಗಳು 5 ಸಾವಿರ ಸಹಾಯ ಧನ ನೀಡಲಾಗುವುದು ಎಂದು ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಸರ್ಕಾರ ಮಹತ್ವ ನಿರ್ಧಾರಗಳ ಕುರಿತು ಘೋಷಣೆ ಮಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು, ಕೊರೊನಾ ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಲ್ಲಿ ವ್ಯವಹಾರ ಮಾಡಲು ಇಚ್ಛಿಸುವವರಿಗೆ ಸಾಲ ಸೌಲಭ್ಯ ನೀಡಲಾಗುವುದು. ಇದಕ್ಕೆ ಸರ್ಕಾರಕ್ಕೆ ಶ್ಯೂರಿಟಿ ಇರಲಿದೆ. ಸೋಂಕಿನಿಂದ ಪೋಷಕರು ಅಥವಾ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಗಳಿಗೆ ತಿಂಗಳಿಗೆ 5 ಸಾವಿರ ರೂಪಾಯಿ ನೆರವು ನೀಡುತ್ತೇವೆ. ಅವರ ಶಿಕ್ಷಣದ ವೆಚ್ಚವನ್ನು ಸರ್ಕಾರವೇ ಬರಲಿಸಿದ್ದು, ಅವರಿಗೆ ಉಚಿತ ಶಿಕ್ಷಣ ಲಭ್ಯವಾಗಲಿದೆ ಎಂದು ವಿವರಿಸಿದರು.

ಮಧ್ಯ ಪ್ರದೇಶದಲ್ಲಿ ಮಾರ್ಚ್ 12 ರಂದು 8,970 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, 84 ಮಂದಿ ಸಾವನ್ನಪ್ಪಿದ್ದರು. ಇದರೊಂದಿಗೆ ಮಧ್ಯ ಪ್ರದೇಶದ ಒಟ್ಟು ಸೋಂಕಿತರ ಸಂಖ್ಯೆ 7,00,202 ಲಕ್ಷಗಡಿ ದಾಟಿತ್ತು. ಉಳಿದಂತೆ ರಾಜ್ಯ ಸರ್ಕಾರ ಏಪ್ರಿಲ್ 30 ರಿಂದ ಮೇ 1 ಅವಧಿಯಲ್ಲಿ ನಡೆಯಬೇಕಿದ್ದ 10 ಮತ್ತು 123 ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿತ್ತು.

The post ಮ.ಪ್ರದೇಶದಲ್ಲಿ ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ತಿಂಗಳಿಗೆ ₹5 ಸಾವಿರ ನೆರವು appeared first on News First Kannada.

Source: newsfirstlive.com

Source link