ಯಡಿಯೂರಪ್ಪನವರ ಆಪ್ತ, ಮಾಜಿ ಶಾಸಕ ಬಿಜೆಪಿಗೆ ಗುಡ್​ ಬೈ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ – Yediyurappa’s close aide Hirekerur Former MLA u b banakar Quits BJP


ವಿಧಾನಸಭೆ ಚುನಾವಣೆ ಹತ್ತಿರ ಇರುವಾಗಲೇ ಮಾಜಿ ಶಾಸಕ, ಬಿಎಸ್ ಯಡಿಯೂರಪ್ಪನವರ ಆಪ್ತ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಹಾವೇರಿ: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ (BS Yediyurappa) ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಯು.ಬಿ.ಬಣಕಾರ್ (U B Banakar) ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ. ಬಿಜೆಪಿ (BJP_ ಪಕ್ಷದ ಸದಸ್ಯತ್ವ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಬಣಕಾರ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಕುರಿತು ಟಿವಿ9ಗೆ ಖಚಿತಪಡಿಸಿದ್ದಾರೆ.

ಕಾಂಗ್ರೆಸ್​ಗೆ ಭಾರಿ ದುಬಾರಿಯಾದ ಸತೀಶ್ ಜಾರಕಿಹೊಳಿ ನಡೆ: ಕೈ ಹೋರಾಟಗಳೆಲ್ಲ ನೀರಿನಲ್ಲಿ ಹೋಮ

ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದ ಬಣಕಾರ್, ತಾಲೂಕಿನಲ್ಲಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿ ತೊರೆದಿದ್ದಾರೆ. ಎದುರಾಳಿಯಾಗಿದ್ದ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಬಣಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಣಕಾರ್ ಅವರನ್ನು ಸಮಾಧಾನಪಡಿಸಲು ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಮಾಡಲಾಗಿತ್ತು. ಆದ್ರೆ, ಇದೀಗ ಬಣಕರ್ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದಾರೆ.

2 ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್​​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲುಕಂಡಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಬಣಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಸಾಧ್ಯತೆಗಳು ಕಡಿಮೆ.

ಇದರಿಂದ ಬಣಕಾರ್ ತಮ್ಮ ಮುಂದಿನ ರಾಜಕೀಯ ನಡೆಗಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ಅಲ್ಲದೇ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಕಾಂಗ್ರೆಸ್​ನಿಂದ ಅಖಾಡಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.