ಮೈಸೂರು: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ವಾಧಿಕಾರಿ. ಅವರ ಬಗ್ಗೆ ಮಠಾಧೀಶರಿಗೆ ಯಾಕೆ ಇಷ್ಟೊಂದು ಒಲವು‌? ಬಿ.ಡಿ.ಜತ್ತಿ, ನಿಜಲಿಂಗಪ್ಪ, ಕಂಠಿಗಿಲ್ಲದ ಒಲವು ಬಿಎಸ್‌ವೈಗೆ ಯಾಕೆ? ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ದುರಾಡಳಿತ ನಡೆಸಿದ್ದಾರೆ. ಬಿಜೆಪಿಗೆ ಯಡಿಯೂರಪ್ಪನೇ ಹೈಕಮಾಂಡ್. ಮಂತ್ರಿಗಳು ಇಲ್ಲ, ಶಾಸಕರು ಇಲ್ಲ ಸಂಸದರು ಇಲ್ಲ‌. ಎಲ್ಲರನ್ನ ಹೆದರಿಸಿ ಇಟ್ಟುಕೊಂಡಿದ್ದಾರೆ. ಕೊರೊನಾ ತುರ್ತು ಪರಿಸ್ಥತಿಯನ್ನ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಹರಿಹಾಯ್ದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಭಾಷೆಗೆ ಧಕ್ಕೆಯಾಗಿದೆ. ಪದವಿ ಶಿಕ್ಷಣದಲ್ಲಿ ಕನ್ನಡ ಪಠ್ಯ ಕಡಿತ ಮಾಡಿರೋದು ಸರಿಯಲ್ಲ‌. ಸರ್ಕಾರ ಕೂಡಲೇ ಹಳೇ ಶಿಕ್ಷಣ ಪದ್ದತಿಯನ್ನೇ ಮುಂದುವರೆಸಬೇಕು ಎಂದು ಇದೇ ವೇಳೆ ವಾಟಾಳ್ ನಾಗರಾಜ್ ಒತ್ತಾಯಿಸಿದ್ರು.

The post ಯಡಿಯೂರಪ್ಪ ರಾಜೀನಾಮೆಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ appeared first on News First Kannada.

Source: newsfirstlive.com

Source link