ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಿಂಗಾಯಿತ ಸಮುದಾಯದ ಪ್ರಶ್ನಾತೀತ ನಾಯಕರು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತಗೆಯಬಾರದು. ಅವರು ಸಿಎಂ ಆಗಿ ಮುಂದುವರಿದರೆ ಅದು ಕಾಂಗ್ರೆಸ್ ಪಕ್ಷಕ್ಕೂ ಅನುಕೂಲ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಹೇಳಿದರು.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಎರಡು ವರ್ಷದಲ್ಲಿ ಹಗರಿಬೊಮ್ಮನಹಳ್ಳಿ ಕೇತ್ರಕ್ಕೆ 10 ಕೋಟಿ ರೂ. ಬಂದಿದೆ. ಅನುದಾನದಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ. ಆದರೆ ಸಿದ್ದರಾಮಯ್ಯ ಅವರ ಸರ್ಕಾರ ರಚನೆಯಾದ ಸಂದರ್ಭದಲ್ಲಿ 167 ಭರವಸೆಗಳನ್ನು ಈಡೇರಿಸದರು ಎಂದರು.

ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾದಿಂದ ಮೃತಪಟ್ಟವರ ಡೆತ್ ಸರ್ಟಿಫಿಕೇಟ್ ಸಿಗುತ್ತಿಲ್ಲ. ಕೊರೊನಾ ಸಮಯದಲ್ಲಿ ಸಾಕಷ್ಟು ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ಅದು ಯಾರಿಗೆ ತಲುಪಿದ? ಕಾಂಗ್ರೆಸ್ ಪಕ್ಷದ ಶಾಸಕರು ಇರೋ ಕ್ಷೇತ್ರಗಳಿಗೆ ಅನುದಾನ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗ ಎಲ್ಲರಿಗೂ ಅನುಕೂಲವಾಗಿತ್ತು ಎಂದರು.

The post ಯಡಿಯೂರಪ್ಪ ಲಿಂಗಾಯಿತ ಸಮುದಾಯದ ಪ್ರಶ್ನಾತೀತ ನಾಯಕರು: ಕಾಂಗ್ರೆಸ್ ಶಾಸಕ appeared first on Public TV.

Source: publictv.in

Source link