ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದೆ. ತಾಲೂಕಿನ ಕೊನಸಾಗರ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಶುಕ್ರವಾರ ರಾತ್ರಿ ಸುರಿದ ಮಳೆಯ ಆರ್ಭಟದಿಂದ ಹಳ್ಳ ಕೊಳ್ಳಗಳು ತುಂಬಿ ಹರಿದಿದ್ದು, ಬಿಸಿಲಿನ ಬೇಗೆಗೆ ಕಾದಿದ್ದ ಭೂಮಿ ತಂಪಾಗಿದೆ. ಮಳೆ ಸುರಿದಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನೂ ಆಲಿಕಲ್ಲು ಸಹಿತ ಮಳೆಯಾಗಿದ್ದು ಅಲ್ಲಲ್ಲಿ ಒಂದಿಷ್ಟು ನಷ್ಟ ಆಗಿದೆ.

The post ಯಲಬುರ್ಗಾದಲ್ಲಿ ಆಲಿಕಲ್ಲು ಸಮೇತ ಭಾರೀ ಮಳೆ appeared first on News First Kannada.

Source: newsfirstlive.com

Source link