– 59 ಸಾವು, 4,775 ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಬಾಗಲಕೋಟೆ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಇಂದು ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಲ್ಲಿ ಇಂದು 1,564 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 59 ಮಂದಿ ಸಾವನ್ನಪ್ಪಿದ್ದಾರೆ. 4,775 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ 44,846 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.02 ಮತ್ತು ಮರಣ ಪ್ರಮಾಣ ಶೇ.3.77ರಷ್ಟು ದಾಖಲಾಗಿದೆ. ಇದುವರೆಗೆ ರಾಜ್ಯದಲ್ಲಿ 35,367 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ ಒಟ್ಟು 1,53,083 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,19,252 + 33,831 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 352 ಮಂದಿಗೆ ಕೊರೊನಾ ಸೋಂಕು ತಗುಲಿದೆ. 1,742 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 3 ಮಂದಿ ಸಾವನ್ನಪ್ಪಿದ್ದು, ಸದ್ಯ ಸಿಲಿಕಾನ್ ಸಿಟಿಯಲ್ಲಿ 18,018 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇದುವರೆಗೂ ಮಹಾಮಾರಿ 15,668 ಜನರನ್ನು ಬಲಿ ಪಡೆದುಕೊಂಡಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?:
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 0, ಬಳ್ಳಾರಿ 17, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 42, ಬೆಂಗಳೂರು ನಗರ 352, ಬೀದರ್ 3, ಚಾಮರಾಜನಗರ 48, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 72, ಚಿತ್ರದುರ್ಗ 6, ದಕ್ಷಿಣ ಕನ್ನಡ 154, ದಾವಣಗೆರೆ 37, ಧಾರವಾಡ 8, ಗದಗ 5, ಹಾಸನ 59, ಹಾವೇರಿ 4, ಕಲಬುರಗಿ 10, ಕೊಡಗು 150, ಕೋಲಾರ 57, ಕೊಪ್ಪಳ 7, ಮಂಡ್ಯ 65, ಮೈಸೂರು 162, ರಾಯಚೂರು 4, ರಾಮನಗರ 14, ಶಿವಮೊಗ್ಗ 77, ತುಮಕೂರು 116, ಉಡುಪಿ 28, ಉತ್ತರ ಕನ್ನಡ 24, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

The post ಯಾದಗಿರಿ, ಬಾಗಲಕೋಟೆಯಲ್ಲಿ ಶೂನ್ಯ- ರಾಜ್ಯದಲ್ಲಿಂದು 1,564 ಹೊಸ ಪ್ರಕರಣ appeared first on Public TV.

Source: publictv.in

Source link