ಯಾರು ಹೇಳಿದ್ದು ಸಚಿವ ಜೈನ್​ಗೆ ಊಟ ಕೊಟ್ಟಿಲ್ಲ ಅಂತಾ ಇಲ್ಲಿ ನೋಡಿ : ತಿಹಾರ್​ ಜೈಲಿನ ವಿಡಿಯೋ ವೈರಲ್ – Satyendar Jain Now Seen Getting Proper Food In Jail After Viral Massage Video


ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ತಿಹಾರ್ ಜೈಲಿನಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ ಹಾಗಾಗಿ 28 ಕೆಜಿ ಕಡಿಮೆಯಾಗಿದ್ದಾರೆ ಎಂದು ದೂರಿರುವ ಬೆನ್ನಲ್ಲೇ ಇದೀಗ ತಿಹಾರ್ ಜೈಲಿನ ಹೊಸ ವಿಡಿಯೋವೊಂದು ವೈರಲ್ ಆಗಿದೆ.

ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ತಿಹಾರ್ ಜೈಲಿನಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ ಹಾಗಾಗಿ 28 ಕೆಜಿ ಕಡಿಮೆಯಾಗಿದ್ದಾರೆ ಎಂದು ದೂರಿರುವ ಬೆನ್ನಲ್ಲೇ ಇದೀಗ ತಿಹಾರ್ ಜೈಲಿನ ಹೊಸ ವಿಡಿಯೋವೊಂದು ವೈರಲ್ ಆಗಿದೆ. ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ಹೊಸ ವೀಡಿಯೊ ನವೆಂಬರ್ 23 ರ ಬುಧವಾರ ಬಿಡುಗಡೆಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಜೈನ್ ಆಹಾರ ಸೇವಿಸುತ್ತಿರುವುದನ್ನು ಕಾಣಬಹುದು. ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಜೈನ್ ರೆಸ್ಟೋರೆಂಟ್‌ಗಳಿಂದ ಆರ್ಡರ್ ಮಾಡಿದ ಆಹಾರವನ್ನು ತಿನ್ನುವುದನ್ನು ಸ್ಪಷ್ಟವಾಗಿ ಕಾಣಬಹುದು ಎಂದು ಹೇಳಿದ್ದಾರೆ.

ಜೈನ್ ಅವರು ಜೈಲಿನಲ್ಲಿ ಹಸಿವಿನಿಂದ ಬಳಲುತ್ತಿದ್ದಾರೆ ಮತ್ತು ಜೈಲಿನಲ್ಲಿ ತನಗೆ ಇಷ್ಟವಾದ ಧಾರ್ಮಿಕ ಆಹಾರ ಸಿಗುತ್ತಿಲ್ಲ ಎಂದು ಜೈನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಒಂದು ದಿನದ ನಂತರ ಈ ವೀಡಿಯೊ ಬೆಳಕಿಗೆ ಬಂದಿದೆ.

ತಿಹಾರ್ ಜೈಲು ಮೂಲಗಳಿಂದ ಪಡೆದ ಇತ್ತೀಚಿನ ಸಿಸಿಟಿವಿ ದೃಶ್ಯಾವಳಿಗಳು ದೆಹಲಿ ಸಚಿವ ಸತ್ಯೇಂದ್ರ ಜೈನ್ ಜೈಲಿನಲ್ಲಿ ಸರಿಯಾದ ಆಹಾರವನ್ನು ಪಡೆಯುತ್ತಿದ್ದಾರೆ ಎಂದು ತೋರಿಸುತ್ತವೆ. ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾಗ 8 ಕೆಜಿ ತೂಕವನ್ನು ಹೆಚ್ಚಿಸಿಕೊಂಡಿದ್ದಾರೆ ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ. ಆದರೆ ಅವರ ವಕೀಲರು 28 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿತ್ತು.

ಸೋಮವಾರ, ಜೈನ್ ಅವರು ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಆಹಾರ ಪದಾರ್ಥಗಳನ್ನು ಒದಗಿಸಲು ತಿಹಾರ್ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿ ದೆಹಲಿ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಸರಿಯಾದ ಆಹಾರ ಸಿಗುತ್ತಿಲ್ಲ, ವೈದ್ಯಕೀಯ ತಪಾಸಣೆ ಮಾಡಲಾಗುತ್ತಿಲ್ಲ, 28 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಅರ್ಜಿಯು ಮಂಗಳವಾರ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರ ಮುಂದೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಸಚಿವರ ವೈದ್ಯಕೀಯ ತಪಾಸಣೆಯನ್ನು ತಕ್ಷಣವೇ ನಡೆಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿದೆ. ಜೈನ್‌ಗೆ ಮೂಲಭೂತ ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಅವರ ವಕೀಲ ಮೊಹಮ್ಮದ್ ಇರ್ಷಾದ್ ಆರೋಪಿಸಿದ್ದರು.

ಕೊಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಮೇ ತಿಂಗಳಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು. ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಸತ್ಯೇಂದ್ರ ಜೈನ್ ಅವರು ಷೇರುದಾರರಾಗಿದ್ದ 4 ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪಿಸಿತ್ತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *