ಮೈಸೂರು: ಜಿಲ್ಲೆಯಲ್ಲಿ ಸದ್ಯಕ್ಕೆ ಬೆಡ್ ಹಾಗೂ ಆಕ್ಸಿಜನ್ ಕೊರತೆ ಇಲ್ಲ. ಇನ್ನೊಂದು ವಾರದಲ್ಲಿ ಹೆಚ್ಚುವರಿ 700 ಆಕ್ಸಿಜನ್ ಬೆಡ್‌ಗಳ ಸೌಲಭ್ಯ ಒದಗಿಸಲಾಗುತ್ತದೆ ಅಂತ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಕೋವಿಡ್ ರೋಗಿಗಳಿಗೆ ಇಲ್ಲಿರುವ ಬೆಡ್‌ಗಳು ಸಾಕಾಗುತ್ತಿತ್ತು. ಆದರೆ ಹೊರ ಜಿಲ್ಲೆಗಳಿಂದ ಮೈಸೂರಿಗೆ ಚಿಕಿತ್ಸೆಗೆ ಬರುತ್ತಿದ್ದಾರೆ. ಕೆಲವರು ಆಕ್ಸಿಜನ್ ಬೆಡ್‌ ಸಿಗುತ್ತೋ ಇಲ್ವೋ ಎಂಬ ಆತಂಕದಿಂದ ಬೆಡ್‌ಗಳನ್ನ ಅಡ್ವಾನ್ಸ್ ಬುಕ್ಕಿಂಗ್ ಮಾಡುತ್ತಿದ್ದಾರೆ ಎಂದರು.

ಯಾರೂ ಅಡ್ವಾನ್ಸ್ ಬುಕ್ಕಿಂಗ್ ಮಾಡಬೇಡಿ. ಶೇಕಡ 95ರಷ್ಟು ಮಂದಿ ಹೋಂ ಐಸೋಲೇಷನ್‌ನಿಂದಲೇ ಗುಣಮುಖರಾಗುತ್ತಿದ್ದಾರೆ. ಅಗತ್ಯವಿದ್ದರೆ ಮಾತ್ರ ಆಸ್ಪತ್ರೆಗಳಿಗೆ ದಾಖಲಾಗಿ‌ ಎಂದು ರೋಹಿಣಿ ಸಿಂಧೂರಿ  ಮನವಿ ಮಾಡಿದರು.

The post ಯಾರೂ ಬೆಡ್​​ಗಳ ಅಡ್ವಾನ್ಸ್ ಬುಕ್ಕಿಂಗ್ ಮಾಡ್ಬೇಡಿ.. ಅಗತ್ಯವಿದ್ರೆ ಮಾತ್ರ ಆಸ್ಪತ್ರೆಗಳಿಗೆ ದಾಖಲಾಗಿ‌- ಸಿಂಧೂರಿ appeared first on News First Kannada.

Source: News First Kannada
Read More