ಹೈದರಾಬಾದ್: ಬಾಲಿವುಡ್, ಸ್ಯಾಂಡಲ್‍ವುಡ್ ದಿಗ್ಗಜರನ್ನು ಕಾಡುತ್ತಿರುವ ಮಹಾಮಾರಿ ಕೊರೊನಾ ಇದೀಗ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರಿಗೂ ಸೋಂಕು ದೃಢಪಟ್ಟಿದೆ.

ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಹೋಂ ಐಸೋಲೇಷನ್‍ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ನಾನು ಆರೋಗ್ಯವಾಗಿದ್ದೇನೆ. ಯಾರೊಬ್ಬರು ನನ್ನ ಕುರಿತು ಚಿಂತಿಸದಿರಿ ಎಂದು ಅಭಿಮನಿಗಳಲ್ಲಿ ಅಲ್ಲು ಅರ್ಜುನ್ ಮನವಿ ಮಾಡಿದ್ದಾರೆ.

ಚಂದನವನದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ ಆರೋಗ್ಯ ಕಳೆದ ಐದು ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕಣಗಾಲ್ ನಿಧನರಾಗಿದ್ದಾರೆ. ಇದನ್ನು ಓದಿ: ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಕೊರೊನಾಗೆ ಬಲಿ

The post ಯಾರೊಬ್ಬರು ನನ್ನ ಬಗ್ಗೆ ಚಿಂತಿಸದಿರಿ: ಅಲ್ಲುಅರ್ಜುನ್ appeared first on Public TV.

Source: publictv.in

Source link