ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ವಜಾ ಮಾಡಿದೆ.

ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಸಾಕ್ಷ್ಯಾಧಾರ ನಾಶ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ವಿಚಾರಣೆಯನ್ನ ಸಿಬಿಐ ವಹಿಸಿಕೊಂಡಿದ್ದು, ಈಗಾಗಲೇ ಕೋರ್ಟ್​ಗೆ ಚಾರ್ಜ್ ಶೀಟ್​ ಸಲ್ಲಿಕೆಯಾಗಿತ್ತು. ಸಿಬಿಐ ಪರ ಎಸ್ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದರು.

The post ಯೋಗೇಶ್ ಗೌಡ ಹತ್ಯೆ ಕೇಸ್​; ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ appeared first on News First Kannada.

Source: newsfirstlive.com

Source link