ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ

ಹುಬ್ಬಳ್ಳಿ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ನಗರದ ಜನತಾ ಬಜಾರದಲ್ಲಿರುವ ಭಾಸ್ಕರ ರಾವ್ ಅವರ ಎಲುಬು ಕೀಲು ಮತ್ತು ಅಪಘಾತ ಚಿಕಿತ್ಸಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಉಣಕಲ್ ಗ್ರಾಮದ ಶಾಂತಮ್ಮ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ನಂತರ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿದ್ದಾರೆ.

ಈ ವೇಳೆ ಸಂಬಂಧಿಕರ ಆಕ್ರೋಶ ಕಂಡು ಬೆದರಿದ ವೈದ್ಯರು ಮತ್ತು ಸಿಬ್ಬಂದಿ ಪಕ್ಕದಲ್ಲಿದ್ದ ಠಾಣೆಗೆ ಓಡಿ ಹೋಗಿ ರಕ್ಷಣೆ ಪಡೆದುಕೊಂಡಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸರು ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

The post ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ appeared first on Public TV.

Source: publictv.in

Source link