ರಸ್ತೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ

ಹಾಸನ: ರಸ್ತೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆಯಾದ ಘಟನೆ ಹಾಸನ ತಾಲ್ಲೂಕಿನ ಉದ್ದೂರು ಗ್ರಾಮದಲ್ಲಿ ನಡೆದಿದೆ.

ಸಂಸದ ಪ್ರಜ್ವಲ್ ರೇವಣ್ಣ ಗುದ್ದಲಿ ಪೂಜೆ ನೆರವೇರಿಸಿ ಭಾಷಣ ಮಾಡುತ್ತಿದ್ದ ವೇಳೆ ಗ್ರಾಮಸ್ಥನೋರ್ವ ಇಷ್ಟು ದಿನ ಎಲ್ಲಿ ಹೋಗಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿರೋ ಘಟನೆ ನಡೆದಿದೆ.

ಘಟನೆಯಲ್ಲಿ ಕೆಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದ್ದು ಎರಡೂ ಕಡೆಯವರು ಪೊಲೀಸ್ ಠಾಣೆ ಎದುರು ಜಮಾವಣೆಯಾಗಿದ್ದಾರೆ. ಪೆನ್ ಷನ್ ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ಕೊಡಲು ಎರಡೂ ಪಕ್ಷದ ಕಾರ್ಯಕರ್ತರು ಆಗಮಿಸಿದ್ದಾರೆ.

News First Live Kannada

Leave a comment

Your email address will not be published. Required fields are marked *