ನವದೆಹಲಿ: ತಮ್ಮ ತಾಯಿಯ ಶಸ್ತ್ರ ಚಿಕಿತ್ಸೆಗೆ ಹಣವಿಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಅವರ ಸಹೋದರ ಸೋಹೆಲ್ ಖಾನ್ ನೆರವಿನ ಹಸ್ತ ಚಾಚಿದ್ದಾರೆ.

ಬಾಲಿವುಡ್ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಅವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ರಾಖಿ ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಬಿಗ್ ಬಾಸ್ ಮನೆಯಿಂದ ಹೊರ ಬಂದ ರಾಖಿ ಅಮ್ಮನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಆದರೆ, ಅವರಿಗೆ ಆರ್ಥಿಕ ಸಮಸ್ಯೆ ಎದುರಾಗಿತ್ತು. ಶಸ್ತ್ರ ಚಿಕಿತ್ಸೆಗೆ ಹಣ ಹೊಂದಿಸಲು ರಾಖಿ ಪರದಾಡುತ್ತಿದ್ದರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನೋವು ಹಂಚಿಕೊಂಡಿದ್ದ ಅವರು, ಸಹಾಯ ಹಸ್ತದ ನೆರವು ಕೋರಿದ್ದರು.

ಇದೀಗ ರಾಖಿ ಸಾವಂತ್ ಅವರ ಕಷ್ಟಕ್ಕೆ ಮಿಡಿದಿರುವ ಭಜರಂಗಿ ಭಾಯಿಜಾನ್ ಹಣ ನೀಡಿದ್ದಾರೆ. ಇವರ ನೆರವಿನಿಂದಾಗಿ ರಾಖಿ ಸಾವಂತ್ ಅವರ ತಾಯಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನೆರವೇರಿದೆ.

ಸಲ್ಲು ಕುಟುಂಬಕ್ಕೆ ರಾಖಿ ಧನ್ಯವಾದ :

ತಮ್ಮ ಸಂಕಷ್ಟದ ಸಮಯಕ್ಕೆ ಆಪತ್ಬಾಂಧವರಾಗಿರುವ ಸಲ್ಮಾನ್ ಖಾನ್, ಸೋಹೆಲ್ ಖಾನ್ ಹಾಗೂ ಅವರ ಕುಟುಂಬಕ್ಕೆ ರಾಖಿ ಸಾವಂತ್ ಧನ್ಯವಾದ ಹೇಳಿದ್ದಾರೆ. ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಸಲ್ಮಾನ್ ಖಾನ್ ಅವರಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿದ್ದಾರೆ.

ಸಿನೆಮಾ – Udayavani – ಉದಯವಾಣಿ
Read More