ಬೆಂಗಳೂರು: ರಾಜಕಾರಣಿಗಳಿಂದ ಕೋವಿಡ್ ರೂಲ್ಸ್ ಬ್ರೇಕ್ ಮಾಡುವ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು.

ರೂಲ್ಸ್ ಬ್ರೇಕ್ ಮಾಡಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಿದ್ದ ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರ ಪ್ರಮಾಣಪತ್ರಕ್ಕೆ ಹೈಕೋರ್ಟ್ ಗರಂ ಆಯ್ತು. ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ ಮಾಡಿತು.

ತಕ್ಷಣ ಕ್ರಮಕ್ಕೆ ಎಪಿಎಂಸಿ ಯಾರ್ಡ್ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿತು. ಇನ್ನು ಇದಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿತು. ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸ್ಪಷ್ಟನೆ ನೀಡಿತು. ಒಂದು ವೇಳೆ ಎಫ್​ಐಆರ್ ಆಗಿದ್ದರೆ ತನಿಖಾ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸೂಚನೆ ನೀಡಿತು. ಜನವರಿ 17 ರಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಂಡಿದ್ದರು.

The post ರಾಜಕಾರಣಿಗಳಿಂದ ಕೊರೊನಾ ರೂಲ್ಸ್​ ಬ್ರೇಕ್​; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ತರಾಟೆ appeared first on News First Kannada.

Source: newsfirstlive.com

Source link