ರಾಜಕೀಯ ವಿರೋಧಿಗಳ ಮೇಲೆ ಹಗೆ ತೀರಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದ್ದಾರೆ ಮೋದಿ: ಮನೀಶ್ ಸಿಸೋಡಿಯಾ | Narendra Modi misusing CBI against political rivals says Delhi’s Deputy Chief Minister Manish Sisodia


2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಅರವಿಂದ ಕೇಜ್ರಿವಾಲ್ ಅವರನ್ನು ಪ್ರಮುಖ ಸವಾಲು ಎಂದು ಅರಿತಿರುವುದರಿಂದ ಅವರ ಸರ್ಕಾರ ನಮ್ಮ ಪಕ್ಷದ ನಾಯಕರನ್ನು ಹೆದರಿಸಲು ಬಯಸುತ್ತದೆ ಎಂದಿದ್ದಾರೆ ಸಿಸೋಡಿಯಾ.

ರಾಜಕೀಯ ವಿರೋಧಿಗಳ ಮೇಲೆ ಹಗೆ ತೀರಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದ್ದಾರೆ ಮೋದಿ: ಮನೀಶ್ ಸಿಸೋಡಿಯಾ

ಮನೀಶ್ ಸಿಸೋಡಿಯಾ

ದೆಹಲಿ:  ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party) ಮಾಡುತ್ತಿರುವ ಶಿಕ್ಷಣ ಕ್ರಾಂತಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕಾರ್ಯಗಳಿಗೆ ದೇಶದಲ್ಲಿ ಮತ್ತು ವಿದೇಶದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದನ್ನು ನೋಡಿ ಕೇಂದ್ರ ಸರ್ಕಾರಕ್ಕೆ ಸಹಿಸಲಾಗುತ್ತಿಲ್ಲ. ಹಾಗಾಗಿಯೇ ಅವರು ನಮ್ಮ ಮೇಲೆ ಸಿಬಿಐ ದಾಳಿ ನಡೆಸುತ್ತಿದ್ದಾರೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಹೇಳಿದ್ದಾರೆ. ಎನ್​​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿಸೋಡಿಯಾ, ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮದ್ಯ ನೀತಿ ಉಲ್ಲಂಘನೆ ಕುರಿತು ಸಿಬಿಐ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯಲ್ಲಿ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಅರವಿಂದ ಕೇಜ್ರಿವಾಲ್ ಅವರನ್ನು ಪ್ರಮುಖ ಸವಾಲು ಎಂದು ಅರಿತಿರುವುದರಿಂದ ಅವರ ಸರ್ಕಾರ ನಮ್ಮ ಪಕ್ಷದ ನಾಯಕರನ್ನು ಹೆದರಿಸಲು ಬಯಸುತ್ತದೆ ಎಂದಿದ್ದಾರೆ ಸಿಸೋಡಿಯಾ. ಭಾರತವನ್ನು ವಿಶ್ವದ ನಂಬರ್ ಒನ್ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಿ ದೇಶಕ್ಕೆ ಬೇಕಾಗಿದೆಯೇ ಹೊರತು ಸಿಬಿಐ ಮತ್ತು ಇಡಿ ಬಗ್ಗೆ ನಿರಂತರವಾಗಿ ಯೋಚಿಸುವವರಲ್ಲ ಎಂದು ಅವರು ಹೇಳಿದರು. ಪ್ರಧಾನಿ ಮೋದಿ ಅವರು ತಮ್ಮ ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಸಿಬಿಐ ಮತ್ತು ಇಡಿ ಮೂಲಕ ದಾಳಿಗಳನ್ನು ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಾರೆ, ಆದರೆ ಅರವಿಂದ ಕೇಜ್ರಿವಾಲ್ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗದ ಬಗ್ಗೆ ಯೋಚಿಸುತ್ತಾರೆ ಎಂದು ಸಿಸೋಡಿಯಾ ಹೇಳಿದ್ದಾರೆ.

ನಾನೇನು ತಪ್ಪು ಮಾಡಿಲ್ಲ. ನಮ್ಮ ಮನೆಯಲ್ಲಿ 14 ಗಂಟೆಗಳ ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ .ಯಾವುದೇ ಹಗರಣ ನಡೆಯದಿರುವ ಕಾರಣ ಏನು ಪತ್ತೆಯಾಗುತ್ತದೆ?. ಅಬಕಾರಿ ನೀತಿಯಲ್ಲಿ ಯಾವುದೇ ವಂಚನೆಯ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಬಿಜೆಪಿ ಆಡಳಿತದ ಗುಜರಾತ್‌ನಲ್ಲಿ ಪ್ರತಿ ವರ್ಷ ₹ 10,000 ಕೋಟಿ ಅಬಕಾರಿ ತೆರಿಗೆ ವಂಚನೆ ಆಗುತ್ತಿರುವ ಭ್ರಷ್ಟಾಚಾರದ ಬಗ್ಗೆ ಮೊದಲು ತನಿಖೆ ನಡೆಸಬೇಕಾಗಿತ್ತು. ವಿಷ ಮದ್ಯ ಸೇವಿಸಿ ಅಲ್ಲಿ ಸಾವಿರಾರು ಜನರು ಸಾಯುತ್ತಾರೆ.

ಬಿಜೆಪಿ ಮುಖಂಡರೊಬ್ಬರು ಮೊದಲು ₹ 8 ಸಾವಿರ ಹಗರಣ, ನಂತರ ಮತ್ತೊಬ್ಬ ನಾಯಕ ₹ 1,100 ಕೋಟಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು. ಈಗ ₹ 144 ಕೋಟಿ ಹಗರಣದ ಆರೋಪ ಮಾಡುತ್ತಿದ್ದಾರೆ, ಆದರೆ ಮದ್ಯ ನೀತಿ ಅನುಷ್ಠಾನದಲ್ಲಿ ಸಂಪೂರ್ಣ ಪಾರದರ್ಶಕತೆ ಇದ್ದ ಕಾರಣ ಅವರಿಗೆ ಏನೂ ಸಿಗುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನನ್ನನ್ನು ಬಂಧಿಸುವ ಸಾಧ್ಯತೆ ಇದೆ. ಆದರೆ ಇದು ನಮ್ಮ ಪಕ್ಷದ ಒಳ್ಳೆಯ ಕೆಲಸಕ್ಕೆ ಅಡ್ಡಿಯಾಗುವುದಿಲ್ಲ. ನಾನು ಹೆದರುವುದಿಲ್ಲ ಎಂದು ಅವರು ಹೇಳಿದರು. ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಶುಕ್ರವಾರ ಅಬಕಾರಿ ಇಲಾಖೆಯನ್ನು ನಿರ್ವಹಿಸುತ್ತಿರುವ ಮನೀಶ್ ಸಿಸೋಡಿಯಾ ಅವರ ನಿವಾಸ ಮತ್ತು ಏಳು ರಾಜ್ಯಗಳ 31 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿತ್ತು. ಸಿಬಿಐನ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳ ಪಟ್ಟಿಯಲ್ಲಿ ಸಿಸೋಡಿಯಾ ಪ್ರಮುಖ ಆರೋಪಿ ಆಗಿದ್ದಾರೆ. ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಮೊದಲಾದ ಆರೋಪಗಳು ಸಿಸೋಡಿಯಾ ಮೇಲಿದೆ.

ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಲ್ಲಿ ಮದ್ಯದ ಕಂಪನಿಗಳು ಮತ್ತು ಮಧ್ಯವರ್ತಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಲೆಫ್ಟಿನೆಂಟ್ ಗವರ್ನರ್ ಕಳೆದ ತಿಂಗಳು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಎಎಪಿಯು ಅಬಕಾರಿ ನೀತಿ ಖಾಸಗಿ ಮದ್ಯದ ಉದ್ಯಮಿಗಳಿಗೆ ಆರ್ಥಿಕ ಲಾಭಕ್ಕಾಗಿ ಮಾಡಿ ನೀತಿಯಾಗಿದ್ದು, ಅದರಿಂದ ಸಿಸೋಡಿಯಾ ಲಾಭಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.