ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆ


ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ. ಇಂದು ರಾತ್ರಿಯೂ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ. ನಗರದಲ್ಲಿ ಇನ್ನೂ 3 ದಿನಗಳ‌‌ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗುರುವಾರ ಬೆಂಗಳೂರಲ್ಲಿ 4.2 ಮಿಲಿ ಮೀಟರ್‌ ‌ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಇನ್ನೂ 3 ದಿನ ಮಳೆ ಆಗಲಿದೆ. ಜೊತೆಗೆ ಬೆಂಗಳೂರಲ್ಲಿ ಭೀಕರ ಚಳಿ ವಾತಾವರಣ ಕೂಡ ಮುಂದುವರಿಯಲಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

ಇನ್ನು, ಭಾರೀ ಮಳೆಯಾಗುವ ಕಾರಣ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ತಮಿಳುನಾಡಿನಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾದ ಬೆನ್ನಲ್ಲೇ, ಈಗ ತೆಲಂಗಾಣ, ಆಂಧ್ರ ಪ್ರದೇಶ, ಕೇರಳಗೆ ಮಳೆಯ ಕಂಟಕ ಶುರುವಾಗಿದೆ.

ಮುಂದಿನ ಎರಡು ದಿನಗಳ ಕಾಲ ಆಂಧ್ರಪ್ರದೇಶ, ಕೇರಳ, ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ತಮಿಳುನಾಡಿನಲ್ಲಿ ಬ್ರೇಕ್​ ಕೊಟ್ಟಿರುವ ವರುಣ ಈಗ ಆಂಧ್ರ, ತೆಲಂಗಾಣದಲ್ಲಿ ಅಬ್ಬರಲಿಸಲಿದ್ದಾನೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಹ ಪೀಡಿತ ಸ್ಥಳಗಳಲ್ಲಿ ಎನ್​ಡಿಆರ್​ಎಫ್ ತಂಡವನ್ನ ನಿಯೋಜನೆ ಮಾಡಲಾಗಿದೆ. ಅಲ್ಲದೆ ಸಮುದ್ರ ತೀರದಲ್ಲಿರುವ ಜನರು ಮುನ್ನೆಚ್ಚರಿಕಾ ವಹಿಸುವಂತೆ ಸೂಚನೆ ನೀಡಲಾಗಿದೆ.

News First Live Kannada


Leave a Reply

Your email address will not be published.