ಜೈಪುರ್: ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‍ಒ)ಯ ಜೈಪುರ ಘಟಕ 100 ಆಕ್ಸಿಜನ್ ಕಾನ್ಸೆಂಟ್ರೇಟರ್‌ಗಳನ್ನು  ರಾಜಸ್ಥಾನ ಸರ್ಕಾರಕ್ಕೆ ದೇಣಿಗೆಯಾಗಿ ನೀಡಿದೆ.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದಕ್ಕೆ ಸಹಕರಿಸಿದ ವಿಶ್ವ ಆರೋಗ್ಯ ಸಂಸ್ಥೆಗೆ ರಾಜ್ಯ ಆರೋಗ್ಯ ಸಚಿವ ರಘು ಶರ್ಮಾ ಅವರು ಧನ್ಯವಾದ ತಿಳಿಸಿದ್ದಾರೆ. ರಾಜ್ಯದಲ್ಲಿ ಆಮ್ಲಜನಕದ ಕೊರತೆಯನ್ನು ನೀಗಿಸಲು ರಾಜ್ಯ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶರ್ಮಾ ಹೇಳಿದ್ದಾರೆ.

ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ಮೂಲಕ ಒದಗಿಸಲಾಗುವ ಆಕ್ಸಿಜನ್ ಕಾನ್ಸೆಂಟ್ರೇಟರ್‌ಗಳನ್ನು  ಸಾಂಕ್ರಾಮಿಕ ರೋಗ ನಿಭಾಯಿಸುವ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತಿದೆ. ಈ ಕಾನ್ಸೆಂಟ್ರೇಟರ್‌ಗಳಿಗೆ ನಿಮಿಷಕ್ಕೆ 8 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಸಾಮಥ್ರ್ಯವಿದೆ. ಅದನ್ನು ಅಗತ್ಯಕ್ಕೆ ಅನುಗುಣವಾಗಿ ನಿಮಿಷಕ್ಕೆ 10 ಲೀಟರ್‌ಗೆ ಹೆಚ್ಚಿಸಬಹುದು ಎಂದು ಅವರು ಡಬ್ಲ್ಯುಎಚ್‍ಒ ಪ್ರತಿನಿಧಿ ರಾಕೇಶ್ ಶ್ರೀವಾಸ್ತವ ಹೇಳಿದ್ದಾರೆ.

The post ರಾಜಸ್ಥಾನಕ್ಕೆ 100 ಆಕ್ಸಿಜನ್ ಕಾನ್ಸೆಂಟ್ರೇಟರ್ ದೇಣಿಗೆಯಾಗಿ ನೀಡಿದ ವಿಶ್ವ ಆರೋಗ್ಯ ಸಂಸ್ಥೆ appeared first on Public TV.

Source: publictv.in

Source link