ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಹರಾಜು ಪ್ರಕರಣ; ತಪ್ಪಿತಸ್ಥರಿಗೆ ಶಿಕ್ಷೆ ಖಚಿತ ಎಂದ ಸಿಎಂ ಗೆಹ್ಲೋಟ್ – CM Ashok Gehlot responds to report on girls auctioned on stamps in Rajasthan No one will be spared


ಇದೊಂದು ಆಘಾತಕಾರಿ ಘಟನೆಯಾಗಿದ್ದು, ಈ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸುವುದಾಗಿ ನಮ್ಮ ಸರ್ಕಾರ ಭರವಸೆ ನೀಡುತ್ತದೆ ಎಂದು ಸಿಎಂ ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಹರಾಜು ಪ್ರಕರಣ; ತಪ್ಪಿತಸ್ಥರಿಗೆ ಶಿಕ್ಷೆ ಖಚಿತ ಎಂದ ಸಿಎಂ ಗೆಹ್ಲೋಟ್

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್

ಜೈಪುರ: ರಾಜಸ್ಥಾನದ (Rajasthan) ಭಿಲ್ವಾರಾ ಜಿಲ್ಲೆಯಲ್ಲಿ ಸ್ಟಾಂಪ್ ಪೇಪರ್‌ಗಳಲ್ಲಿ ಸಹಿ ಹಾಕಿಸಿಕೊಂಡು ಹುಡುಗಿಯರನ್ನು ಮಾರಾಟ ಮಾಡಲಾಗಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot), ಈ ಬಗ್ಗೆ ತನಿಖೆ ನಡೆಸಲು ತಂಡಗಳನ್ನು ನಿಯೋಜಿಸಲಾಗಿದೆ. ತಪ್ಪು ಮಾಡಿದವರು ಯಾರೇ ಆಗಲಿ ಅವರನ್ನು ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಇದೊಂದು ಆಘಾತಕಾರಿ ಘಟನೆಯಾಗಿದ್ದು, ಈ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸುವುದಾಗಿ ನಮ್ಮ ಸರ್ಕಾರ ಭರವಸೆ ನೀಡುತ್ತದೆ ಎಂದು ಸಿಎಂ ಗೆಹ್ಲೋಟ್ ಹೇಳಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC), ರಾಷ್ಟ್ರೀಯ ಮಹಿಳಾ ಆಯೋಗ (NCW), ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಮತ್ತು ರಾಜಸ್ಥಾನದ ಮಹಿಳಾ ಆಯೋಗ (RSCW) ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.

ಏನಿದು ಘಟನೆ?:

ರಾಜಸ್ಥಾನದಲ್ಲಿ ಸ್ಟಾಂಪ್ ಪೇಪರ್‌ಗಳ ಮೇಲೆ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡು 8 ವರ್ಷದ ಹುಡುಗಿಯರನ್ನು ಮಾರಾಟ ಮಾಡಲಾಗಿತ್ತು. ನಂತರ ಈ ಪ್ರಕರಣದ ಬಗ್ಗೆ ಎದ್ದ ವಿವಾದಗಳನ್ನು ಇತ್ಯರ್ಥಗೊಳಿಸಲು ಗ್ರಾಮ ಜಾತಿ ಮಂಡಳಿಗಳ ಆದೇಶದ ಮೇರೆಗೆ ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಈ ಕೃತ್ಯ ತಡವಾಗಿ ಬೆಳಕಿಗೆ ಬಂದಿದ್ದು, ರಾಜಸ್ಥಾನದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಈ ಬಗ್ಗೆ ಬುಧವಾರ ವರದಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ನೋಟಿಸ್ ನೀಡಿತ್ತು.

TV9 Kannada


Leave a Reply

Your email address will not be published.