ಜೈಪುರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ(89) ಅವರು ಕೊರೊನಾಗೆ ಬಲಿಯಾಗಿದ್ದಾರೆ.

1980-81ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಹಾಗೂ ಹರಿಯಾಣ ಮತ್ತು ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ಜಗನ್ನಾಥ್ ಪಹಾಡಿಯಾರವರು ಬುಧವಾರ ನಿಧನರಾಗಿದ್ದಾರೆ.

ಈ ಕುರಿತಂತೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ರವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರ ಗುರುವಾರ ಒಂದು ದಿನ ಶೋಕಾಚರಣೆಯನ್ನು ಘೋಷಿಸಿದೆ. ಅಲ್ಲದೇ ಎಲ್ಲಾ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ರಾಷ್ಟ್ರಧ್ವಜವನ್ನು ಅರ್ಧದಷ್ಟು ಹಾರಿಸಲಾಗುತ್ತದೆ.

ಪಹಾಡಿಯಾರವರಿಗೆ ಸಂತಾಪ ಸೂಚಿಸಲು ಗುರುವಾರ ಮಧ್ಯಾಹ್ನ 12 ಗಂಟೆಗೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಅಂದೇ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ.

The post ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೊರೊನಾಗೆ ಬಲಿ appeared first on Public TV.

Source: publictv.in

Source link