ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶಿಸುತ್ತಿರೋ ಹಿನ್ನೆಲೆ ಇಂದು ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಕೃಷಿ ಸಚಿವರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಸಂಜೆ 4:30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶವಾದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದೆ. ಕೃಷಿ ಸಚಿವ ಬಿ.ಸಿ‌. ಪಾಟೀಲ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿ‌ಯಾಗಲಿದ್ದಾರೆ.

ಹಾಗೇ ಇಂದು ಯಡಿಯೂರಪ್ಪ BWSSB ಪ್ರಗತಿ ಪರಿಶೀಲನಾ ಸಭೆ ಕೂಡ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಅಯೋಜನೆಯಾಗಿದೆ. ಬೆಂಗಳೂರಿನ ಕೆಲ ಸಚಿವರು ಹಾಗೂ ಬೆಂಗಳೂರಿನ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ .

 

The post ರಾಜ್ಯಕ್ಕೆ ಮುಂಗಾರು ಪ್ರವೇಶ: ಇಂದು ಕೃಷಿ ಸಚಿವರು-ಅಧಿಕಾರಿಗಳೊಂದಿಗೆ ಸಿಎಂ ಸಭೆ appeared first on News First Kannada.

Source: newsfirstlive.com

Source link