ಬೆಂಗಳೂರು: ರಾಜ್ಯದಲ್ಲಿ ಇಂದು 44,094 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,19,868 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,63,962 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 10,959 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 27,28,248 ಕ್ಕೆ ಏರಿಕೆಯಾಗಿದೆ.

ಇಂದು 20,246 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 24,80,411 ಕ್ಕೆ ಏರಿಕೆಯಾಗಿದೆ. ಇಂದು 192 ಮಂದಿ ಸೋಂಕಿನಿಂದ ಗುಣಮುಖರಾಗದೆ ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 32,291 ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 2,15,525 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

The post ರಾಜ್ಯದಲ್ಲಿಂದು ಪಾಸಿಟಿವ್ ಕೇಸ್​ಗಳಿಗಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ಡಬಲ್: 192 ಸಾವು appeared first on News First Kannada.

Source: newsfirstlive.com

Source link