ರಾಜ್ಯದಲ್ಲಿಂದು 1,639 ಪಾಸಿಟಿವ್ ಕೇಸ್.. 2,214 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 1,639 ಪಾಸಿಟಿವ್ ಕೇಸ್.. 2,214 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 30,786 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,21,838 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,42,714 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,639 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ.

ಇಂದು 2,214 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಒಟ್ಟು 28,26,411 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಇಂದು 36 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು ರಾಜ್ಯದಲ್ಲಿ ಈವರೆಗೆ 36,262 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 25,645 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಆರೋಗ್ಯ ಇಲಾಖೆ ತನ್ನ ಹೆಲ್ತ್​ಬುಲೆಟಿನ್​ನಲ್ಲಿ ಹೇಳಿದೆ.

The post ರಾಜ್ಯದಲ್ಲಿಂದು 1,639 ಪಾಸಿಟಿವ್ ಕೇಸ್.. 2,214 ಮಂದಿ ಡಿಸ್ಚಾರ್ಜ್ appeared first on News First Kannada.

Source: newsfirstlive.com

Source link