ಬೆಂಗಳೂರು: ರಾಜ್ಯಾದ್ಯಂತ ಇಂದು 30,150 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,22,758 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಕಳೆದ 24 ಗಂಟೆಗಳಲ್ಲಿ ಒಟ್ಟು 1,52,908 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 1,806 ಮಂದಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 28,80,370ಕ್ಕೆ ಏರಿಕೆಯಾಗಿದೆ.

ಇಂದು 2,748 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಒಟ್ಟು 28,12,869 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಇಂದು 42 ಮಂದಿ ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು ಈವರೆಗೆ 36,079 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 31,399 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರದಲ್ಲಿ ಇಂದು 411 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದರೆ ದಕ್ಷಿಣ ಕನ್ನಡದಲ್ಲಿ 225, ಹಾಸನ 138, ಮೈಸೂರು 174, ಶಿವಮೊಗ್ಗ 110, ಉಡುಪಿ ಜಿಲ್ಲೆಯಲ್ಲಿ 105 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ.

The post ರಾಜ್ಯದಲ್ಲಿಂದು 1,806 ಮಂದಿಗೆ ಕೊರೊನಾ ಪಾಸಿಟಿವ್.. 2,748 ಡಿಸ್ಚಾರ್ಜ್ appeared first on News First Kannada.

Source: newsfirstlive.com

Source link