ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ನಿನ್ನೆಗಿಂತ ಇಂದು ಸ್ವಲ್ಪ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು 2,848 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 67 ಮಂದಿ ಸಾವನ್ನಪ್ಪಿದ್ದಾರೆ. 5,631 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಪಾಸಿಟಿವಿಟಿ ರೇಟ್ 1.94 ಆಗಿದೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ನಿನ್ನೆಗಿಂತ ಇಂದು ಇಳಿಕೆ ಕಂಡಿದೆ. ಒಟ್ಟು 41,996 ಸಕ್ರಿಯ ಪ್ರಕರಣಗಳು ದಾಖಲಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.2.35ಕ್ಕೆ ಇಳಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 28,56,491ಕ್ಕೆ ಏರಿಕೆ ಕಂಡಿದ್ದು, ಒಟ್ಟು 27,79,038 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇಂದು ರಾಜ್ಯದಲ್ಲಿ ಒಟ್ಟು 1,46,575 ಸ್ಯಾಂಪಲ್ (ಆರ್‍ಟಿ ಪಿಸಿಆರ್ 21,389 + 1,25,186 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರೆಗೆ 16,695 ಮಂದಿ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಬೆಂಗಳೂರಿನಲ್ಲಿ ಇಂದು 520 ಮಂದಿಗೆ ಕೊರೊನಾ ಸೋಂಕು ತಗುಲಿದೆ. 3,136 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 7 ಮಂದಿ ಸಾವನ್ನಪ್ಪಿದ್ದಾರೆ.

ಹಾಸನ 383, ಮೈಸೂರು 371, ದಕ್ಷಿಣ ಕನ್ನಡ 265, ಚಿಕ್ಕಮಗಳೂರು 196, ಶಿವಮೊಗ್ಗ 140, ತುಮಕೂರು 126, ಕೊಡಗು 120, ಉಡುಪಿ 108 ಪ್ರಕರಣಗಳೊಂದಿಗೆ ನೂರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಮತ್ತು ಯಾದಗಿರಿಯಲ್ಲಿ ಕೇವಲ 2 ಪ್ರಕರಣಗಳು ದಾಖಲಾಗಿದೆ.

The post ರಾಜ್ಯದಲ್ಲಿಂದು 2,848 ಕೇಸ್ – 67 ಸಾವು, 5,631 ಮಂದಿ ಡಿಸ್ಚಾರ್ಜ್ appeared first on Public TV.

Source: publictv.in

Source link