ರಾಜ್ಯದಲ್ಲಿಂದು 4,867 ಪಾಸಿಟಿವ್ ಕೇಸ್: 142 ಮಂದಿ ಸಾವು

ರಾಜ್ಯದಲ್ಲಿಂದು 4,867 ಪಾಸಿಟಿವ್ ಕೇಸ್: 142 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 26,519 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,23,212 ಆರ್​ಟಿಪಿಸಿಆರ್​ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,49,731 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 4,867ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. ಇನ್ನು ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ.

ಇಂದು 8,404 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 26,54,139 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 142 ಮಂದಿ ಇಂದು ಸೋಂಕಿನಿಂದ ಗುಣಮುಖರಾಗದೇ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 34,025ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 1,23,134 ಆ್ಯಕ್ಟಿವ್ ಕೇಸ್​​ಗಳಿವೆ ಎಂದು ಆರೋಗ್ಯ ಇಲಾಖೆಯ ಹೆಲ್ತ್​ ಬುಲೆಟಿನ್​ನ ಅಂಕಿ ಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರವೊಂದರಲ್ಲೇ ಇಂದು 1,034 ಮಂದಿಗೆ ಸೋಂಕು ದೃಢಪಟ್ಟಿದ್ದು 28 ಮಂದಿ ಸಾವನ್ನಪ್ಪಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು 546 ಮಂದಿ ಸೋಂಕಿಗೊಳಗಾಗಿದ್ದು 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ದಕ್ಷಿಣ ಕನ್ನಡದಲ್ಲಿ 542, ಹಾಸನದಲ್ಲಿ 364, ಕೊಡಗಿನಲ್ಲಿ 206, ಚಿಕ್ಕಮಗಳೂರಿನಲ್ಲಿ 152 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.

The post ರಾಜ್ಯದಲ್ಲಿಂದು 4,867 ಪಾಸಿಟಿವ್ ಕೇಸ್: 142 ಮಂದಿ ಸಾವು appeared first on News First Kannada.

Source: newsfirstlive.com

Source link