ಬೆಂಗಳೂರು: ರಾಜ್ಯದಲ್ಲಿ ಇಂದು 42,640 ಱಪಿಡ್ ಆ್ಯಂಟಿಜೆನ್ ಟೆಸ್ಟ್ 1,15,802 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,58.442 ಕೊರೊನಾ ಪರೀಕ್ಷೆಗಳನ್ನ ನಡೆಸಲಾಗಿದೆ. ಈ ಪೈಕಿ ಇಂದು ರಾಜ್ಯದಲ್ಲಿ 5,983 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 27,90,338ಕ್ಕೆ ಏರಿಕೆಯಾಗಿದೆ.

ಇಂದು 10,685 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರು ಈವರೆಗೆ 26,10,157 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಇಂದು 138 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು ಈವರೆಗೆ ಒಟ್ಟು 33,434 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 1,46,726 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರದಲ್ಲಿ ಇಂದು 1,209 ಮಂದಿಗೆ ಸೋಂಕು ಪಾಸಿಟಿವ್ ಬಂದಿದ್ದು ಕಳೆ 24 ಗಂಟೆಗಳಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 596 ಮಂದಿ ಸೋಂಕಿಗೊಳಗಾಗಿದ್ದು ಸೋಂಕು ಸಂಖ್ಯೆ ಕಡಿಮೆಯಿದ್ದರೂ 26 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಮೈಸೂರಿನಲ್ಲಿ ಹೆಚ್ಚು ಸೋಂಕಿತರು ಸಾವನ್ನಪ್ಪಿತ್ತಿರುವುದನ್ನ ಇಲ್ಲಿ ಸ್ಮರಿಸಬಹುದು.

The post ರಾಜ್ಯದಲ್ಲಿಂದು 5,983 ಪಾಸಿಟಿವ್ ಕೇಸ್: ಮೈಸೂರಿನಲ್ಲಿ ಸಾವಿನ ಸಂಖ್ಯೆಯಲ್ಲಿಲ್ಲ ಚೇತರಿಕೆ appeared first on News First Kannada.

Source: newsfirstlive.com

Source link