ಬೆಂಗಳೂರು: ರಾಜ್ಯದಲ್ಲಿ ಇಂದು 31,828 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,17,914 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,49,742 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು ರಾಜ್ಯದಲ್ಲಿ 6,835 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೆ ಒಟ್ಟು 27.71,969 ಮಂದಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ.

ಇಂದು 15,409 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಒಟ್ಟು 25,66,774 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 120 ಮಂದಿ ಇಂದು ಸೋಂಕಿನಿಂದಾಗಿ ಸಾವನ್ನಪ್ಪಿದ್ದು ಈವರೆಗೆ 33,033 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 1,72,141 ಆ್ಯಕ್ಟಿವ್ ಕೇಸ್​​ಗಳಿವೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್​ನಲ್ಲಿ ತಿಳಿಸಿದೆ.

ಬೆಂಗಳೂರು ನಗರವೊಂದರಲ್ಲೇ ಇಂದು 1,470 ಮಂದಿಗೆ ಸೋಂಕು ದೃಢಪಟ್ಟಿದ್ದು 12 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 670 ಮಂದಿಗೆ ಸೋಂಕು ತಗುಲಿದ್ದು 25 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಇಂದು ಅತೀ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ಹಾಸನದಲ್ಲಿ 507 ಮಂದಿಗೆ ಸೋಂಕು ತಗುಲಿದ್ದರೆ ಬಳ್ಳಾರಿಯಲ್ಲಿ 203, ದಕ್ಷಿಣ ಕನ್ನಡದಲ್ಲಿ 648, ತುಮಕೂರು 386, ಶಿವಮೊಗ್ಗ 353 ಹಾಗೂ ದಾವಣಗೆರೆಯಲ್ಲಿ 200 ಮಂದಿಗೆ ಸೋಂಕು ಪಾಸಿಟಿವ್ ಬಂದಿದೆ.

The post ರಾಜ್ಯದಲ್ಲಿಂದು 6,835 ಮಂದಿಗೆ ಸೋಂಕು: ಮೈಸೂರಲ್ಲಿ ಅತೀ ಹೆಚ್ಚು ಸಾವು appeared first on News First Kannada.

Source: newsfirstlive.com

Source link