ಬೆಂಗಳೂರು: ರಾಜ್ಯದಲ್ಲಿ ಇಂದು 21,389 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,25,186 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,46,575 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 2848 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ.

ಇಂದು 5631 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 27,79,038 ಮಂದಿ ಗುಣಮುಖರಾದಂತಾಗಿದೆ. ಇಂದು 67 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 35,434ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 41,996 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

ಇನ್ನು ಬೆಂಗಳೂರು ಒಂದರಲ್ಲೇ 520 ಹೊಸ ಪ್ರಕರಣಗಳು ದಾಖಲಾಗಿ, 7 ಮಂದಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಇನ್ನು ಚಿಕ್ಕಮಗಳೂರು 196, ಮೈಸೂರು 371, ತುಮಕೂರಲ್ಲಿ 126, ಶಿವಮೊಗ್ಗ 140, ಉಡುಪಿ 108 ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್​ ಶೇ.1.94ಕ್ಕೆ ಬಂದು ನಿಂತಿದೆ. ಮೃತಪಟ್ಟವರ ಶೇಕಡವಾರು ಪ್ರಮಾಣ ಶೇಕಡಾ 2.35ಕ್ಕೆ ನಿಂತಿದೆ.

The post ರಾಜ್ಯದಲ್ಲಿ ಇಂದು 2848 ಮಂದಿಗೆ ಪಾಸಿಟಿವ್.. 67 ಮಂದಿ ಸೋಂಕಿಗೆ ಬಲಿ appeared first on News First Kannada.

Source: newsfirstlive.com

Source link