ಬೆಂಗಳೂರು: ರಾಜ್ಯದಲ್ಲಿ ಇಂದು 12424 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,45,941 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,58,365 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು ಈ ಪೈಕಿ ಇಂದು 37,733 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇನ್ನು ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 16,01,865ಕ್ಕೆ ಏರಿಕೆಯಾಗಿದೆ.

ಇಂದು 21,149 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 11,64,398 ಮಂದಿ ಗುಣಮುಖರಾದಂತಾಗಿದೆ. ಇಂದು ಸೋಂಕಿನಿಂದಾಗಿ 217 ಮಂದಿ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ 16,011 ಮಂದಿ ಬಲಿಯಾದಂತಾಗಿದೆ. ರಾಜ್ಯದಲ್ಲಿ ಸದ್ಯ 4,21,436 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್​ನಲ್ಲಿ ಹೇಳಿದೆ.

 

The post ರಾಜ್ಯದಲ್ಲಿ ಇಂದು 37,733 ಮಂದಿಗೆ ಕೊರೊನಾ: 16 ಸಾವಿರ ಗಡಿ ದಾಟಿದ ಒಟ್ಟು ಸಾವಿನ ಸಂಖ್ಯೆ appeared first on News First Kannada.

Source: newsfirstlive.com

Source link