ಬೆಂಗಳೂರು: ರಾಜ್ಯದಾದ್ಯಂತ ಇಂದು 6,424 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 90,812 ಆರ್​ಟಿಪಿಸಿಆರ್ ಟೆಸ್ಟ್​​ಗಳೂ ಸೇರಿದಂತೆ ಒಟ್ಟು 97,236 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು ರಾಜ್ಯದಲ್ಲಿ 38,603 ಮಂದಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 22,42,065 ಕ್ಕೆ ಏರಿಕೆಯಾಗಿದೆ.

ಇಂದು 34,635 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಈವರೆಗೆ ಒಟ್ಟು 16,16,092 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸೋಂಕಿನಿಂದಾಗಿ 476 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾಗೆ ಒಟ್ಟು 22,313 ಮಂದಿ ಬಲಿಯಾದಂತಾಗಿದೆ. ರಾಜ್ಯದಲ್ಲಿ ಸದ್ಯ 6,03,639 ಆ್ಯಕ್ಟಿವ್ ಕೇಸ್​​ಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

The post ರಾಜ್ಯದಲ್ಲಿ ಇಂದು 38,603 ಮಂದಿಗೆ ಪಾಸಿಟಿವ್.. 476 ಮಂದಿ ಸಾವು appeared first on News First Kannada.

Source: newsfirstlive.com

Source link