ಬೆಂಗಳೂರು: ರಾಜ್ಯದಲ್ಲಿ ಇಂದು 10,560 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,24,232 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,34,792 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 39,998 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 20,53,191ಕ್ಕೆ ಏರಿಕೆಯಾಗಿದೆ.

ಇಂದು 34,752 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 14,40,621 ಮಂದಿ ಗುಣಮುಖರಾದಂತಾಗಿದೆ. ಇಂದು 517 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 20,368 ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 592182 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

The post ರಾಜ್ಯದಲ್ಲಿ ಇಂದು 39,998 ಮಂದಿಗೆ ಸೋಂಕು; 517 ಸೋಂಕಿತರು ಸಾವು appeared first on News First Kannada.

Source: newsfirstlive.com

Source link