ಬೆಂಗಳೂರು: ರಾಜ್ಯದಲ್ಲಿ ಇಂದು 10,315 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,16,790 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,27,105 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 41,779 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 21,30,267ಕ್ಕೆ ಏರಿಕೆಯಾಗಿದೆ.

ಇಂದು 35,879 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 15,10,557 ಮಂದಿ ಗುಣಮುಖರಾದಂತಾಗಿದೆ. ಇಂದು 373 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 21,085 ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 5,98,605 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

ಇನ್ನು ಬೆಂಗಳೂರು ಒಂದರಲ್ಲೇ 14316 ಹೊಸ ಪ್ರಕರಣಗಳು ದಾಖಲಾಗಿ, 121 ಮಂದಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಇನ್ನು ಬಳ್ಳಾರಿಯಲ್ಲಿ 2421, ಬೆಳಗಾವಿ 1592, ದಕ್ಷಿಣ ಕನ್ನಡ 1215, ಹಾಸನ 1339, ಮಂಡ್ಯ 1385, ರಾಯಚೂರು 1063, ತುಮಕೂರು 2668 ಹಾಗೂ ಉಡುಪಿಯಲ್ಲಿ 1219 ಹೊಸ ಪ್ರಕರಣಗಳು ದಾಖಲಾಗಿವೆ.

The post ರಾಜ್ಯದಲ್ಲಿ ಇಂದು 41,779 ಹೊಸ ಪ್ರಕರಣ; 373 ಮಂದಿ ಸೋಂಕಿನಿಂದ ಸಾವು appeared first on News First Kannada.

Source: newsfirstlive.com

Source link