ಬೆಂಗಳೂರು: ರಾಜ್ಯದಲ್ಲಿ ಇಂದು 13,098 ಱಪಿಡ್ ಆ್ಯಂಟಿಜೆನ್ ಟೆಸ್ಟ್, 1,40,609 ಆರ್​ಟಿಪಿಸಿಆರ್ ಟೆಸ್ಟ್ ಹಾಗೂ 1,53,707 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು ರಾಜ್ಯದಲ್ಲಿ 44,631 ಜನರಿಗೆ ಸೋಂಕು ದೃಢಪಟ್ಟಿರುವುದು ಪತ್ತೆಯಾಗಿದೆ. ಇನ್ನು ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 16,90,934 ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಂದು 24,714 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 12,10,013 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು 292 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 16,538ಕ್ಕೆ ಏರಿದೆ. ಸದ್ಯ ರಾಜ್ಯದಲ್ಲಿ 4,64,363 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್​ನಲ್ಲಿ ಹೇಳಿದೆ.

The post ರಾಜ್ಯದಲ್ಲಿ ಇಂದು 44,631 ಪಾಸಿಟಿವ್ ಕೇಸ್.. 292 ಸಾವು appeared first on News First Kannada.

Source: newsfirstlive.com

Source link