ರಾಜ್ಯದಲ್ಲಿ ಒಂದೇ ವಾರದಲ್ಲಿ 100 ಬ್ಲಾಕ್ ಫಂಗಸ್ ಕೇಸ್​: ಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ

ರಾಜ್ಯದಲ್ಲಿ ಒಂದೇ ವಾರದಲ್ಲಿ 100 ಬ್ಲಾಕ್ ಫಂಗಸ್ ಕೇಸ್​: ಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ

ಬೆಂಗಳೂರು: ಬ್ಲಾಕ್ ಫಂಗಸ್ ಚಿಕಿತ್ಸೆಗೆ ಬೆಡ್ ಮೀಸಲಿಡಲಾಗಿದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ, ಮ್ಯುಕೊರ್ಮೈಕೋಸಿಸ್ ಚಿಕಿತ್ಸೆಗೆ ದುಬಾರಿ ಚುಚ್ಚುಮದ್ದನ್ನ ಉಚಿತವಾಗಿ ನಿಡಲಾಗುತ್ತೆ ಅಂತ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಬ್ಲಾಕ್ ಫಂಗಸ್​ಗೆ ಸೂಕ್ತ ಚಿಕಿತ್ಸೆ ನೀಡುವ ವಿಚಾರವಾಗಿ ಸಲ್ಲಿಕೆಯಾಗಿದ್ದ ವಿಚಾರಣೆ ವೇಳೆ ಸರ್ಕಾರ ಈ ಮಾಹಿತಿ ನೀಡಿದೆ.

ಕಳೆದ ಒಂದು ವಾರದಲ್ಲಿ 100 ಬ್ಲಾಕ್ ಫಂಗಸ್ ಪತ್ತೆಯಾಗಿದ್ದು, ಈವರೆಗೆ 3,086 ಬ್ಲಾಕ್ ಫಂಗಸ್ ಪ್ರಕರಣ ಪತ್ತೆಯಾಗಿದೆ. 2,371 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 247 ಬ್ಲಾಕ್ ಫಂಗಸ್ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಹೈಕೋರ್ಟ್​ಗೆ ಹೇಳಿಕೆ ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಮಾಹಿತಿ ಪ್ರಕಟಿಸಲು ಹಾಗೂ ಕೋವಿಡ್ ಸೋಂಕಿತರಿಗೆ ಬ್ಲಾಕ್ ಫಂಗಸ್ ಬಗ್ಗೆ ಅರಿವು ಮೂಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

The post ರಾಜ್ಯದಲ್ಲಿ ಒಂದೇ ವಾರದಲ್ಲಿ 100 ಬ್ಲಾಕ್ ಫಂಗಸ್ ಕೇಸ್​: ಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ appeared first on News First Kannada.

Source: newsfirstlive.com

Source link