ಬೆಂಗಳೂರು: ರಾಜ್ಯದಲ್ಲಿ ಇಂದು 33,831 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,19,252 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,53,083 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 1564 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ.

ಇಂದು 4775 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 2773407 ಮಂದಿ ಗುಣಮುಖರಾದಂತಾಗಿದೆ. ಇಂದು 59 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 35,367ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 35,367 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

ಇನ್ನು ಬೆಂಗಳೂರು ಒಂದರಲ್ಲೇ 352 ಹೊಸ ಪ್ರಕರಣಗಳು ದಾಖಲಾಗಿ, 3 ಮಂದಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಇನ್ನು 150, ಮೈಸೂರು 162, ತುಮಕೂರಲ್ಲಿ 116 ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್​ ಶೇ.1.02ಕ್ಕೆ ಬಂದು ನಿಂತಿದೆ. ಮೃತಪಟ್ಟವರ ಶೇಕಡವಾರು ಪ್ರಮಾಣ ಶೇಕಡಾ 3.77ಕ್ಕೆ ನಿಂತಿದೆ.

The post ರಾಜ್ಯದಲ್ಲಿ ಮತ್ತಷ್ಟು ಕುಸಿದ ಪಾಸಿಟಿವಿಟಿ ರೇಟ್.. ಇಂದು 1564 ಮಂದಿಗೆ ಕೊರೊನಾ appeared first on News First Kannada.

Source: newsfirstlive.com

Source link