ಬೆಂಗಳೂರು: ರಾಜ್ಯದಲ್ಲಿ ಇಂದು 39,567 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,10,601 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,50168 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 18,324 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 26,53,446ಕ್ಕೆ ಏರಿಕೆಯಾಗಿದೆ.

ಇಂದು 24,036 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 23,36,096 ಮಂದಿ ಗುಣಮುಖರಾದಂತಾಗಿದೆ. ಇಂದು 514 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 30,531ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 2,86,798 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

ಇನ್ನು ಬೆಂಗಳೂರು ಒಂದರಲ್ಲೇ 3533 ಹೊಸ ಪ್ರಕರಣಗಳು ದಾಖಲಾಗಿ, 347 ಮಂದಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಇನ್ನು ಬಳ್ಳಾರಿಯಲ್ಲಿ 503, ಬೆಳಗಾವಿ 839, ಚಿಕ್ಕಮಗಳೂರು 742, ದಾವಣಗೆರೆ 559, ದಕ್ಷಿಣ ಕನ್ನಡ 598, ಹಾಸನ 2078, ಮಂಡ್ಯ 623, ಮೈಸೂರು 1573, ತುಮಕೂರು 979, ಉಡುಪಿ 580 ಹಾಗೂ ಉತ್ತರ ಕನ್ನಡದಲ್ಲಿ 558 ಪ್ರಕರಣಗಳು ದಾಖಲಾಗಿವೆ. ಇನ್ನು ರಾಜ್ಯದಲ್ಲಿ ಪಾಸಿಟಿವಿಟಿ ರೇಟ್​ ಮತ್ತೆ ಏರಿಕೆಯಾಗಿದ್ದು, 12.20ಕ್ಕೆ ಬಂದು ನಿಂತಿದೆ.

The post ರಾಜ್ಯದಲ್ಲಿ ಮತ್ತೆ ಪಾಸಿಟಿವಿಟಿ ರೇಟ್ ಹೆಚ್ಚಳ; ಇಂದು 18,324 ಹೊಸ ಪ್ರಕರಣ appeared first on News First Kannada.

Source: newsfirstlive.com

Source link