ರಾಜ್ಯದಲ್ಲಿ ಮಳೆಗೆ ನೆಲಕಚ್ಚಿದ ಬೆಳೆ- ಮಧ್ಯಾಹ್ನ ಮಹತ್ವದ ಸಭೆ ಕರೆದ ಸಿಎಂ


ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ದಿಢೀರ್ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಳೆಹಾನಿ ವಿಚಾರವಾಗಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ.

ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಸಿಇಒಗಳ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಮಳೆಹಾನಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

ರಾಜ್ಯಾದ್ಯಂತ ಭಾರೀ ಮಳೆ, ಕೆಲವೆಡೆ ಶಾಲೆಗಳಿಗೆ ರಜೆ
ರಾಜ್ಯದ್ಯಾಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ. ಬೆಂಗಳೂರು ಹಾಗೂ ರಾಮನಗರದಲ್ಲಿ ಒಂದು ದಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಶಾಲೆಗಳಿಗೆ ರಜೆ ನೀಡಲಾಗಿದೆ. ಅಲ್ಲದೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ.

ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ
ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗಲಿದೆ ಅಂತಾ ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ. ಇಂದು ಮತ್ತು ನಾಳೆ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ‌ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

News First Live Kannada


Leave a Reply

Your email address will not be published. Required fields are marked *