ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಿಎಸ್​​​ ಯಡಿಯೂರಪ್ಪ ಅವರು ವಿವಿಧ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಒಂದು ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಜಿಲ್ಲೆಗಳ ವಸ್ತುಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕಲ್ಬುರ್ಗಿ, ಕೊಪ್ಪಳ, ವಿಜಯನಗರ, ವಿಜಯಪುರ, ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಸಿಎಂ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಿಎಂ
ಇನ್ನು ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ಇಂದು‌ ವಿಧಾನಸೌಧದಲ್ಲಿ ಸಿಎಂ ಬಿಎಸ್​ವೈ ಪರಿಶೀಲನಾ ಸಭೆ ನಡೆಸಲಿದ್ದಾರೆ. 10 ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ನಡೆಯಲಿದ್ದು, ಬೆಳಗ್ಗೆ 11.30ಕ್ಕೆ ಸಮ್ಮೇಳನ ಸಭಾಂಗಣದಲ್ಲಿ ಪರಿಶೀಲನೆ ಸಿಎಂ ಸಭೆ ನಡೆಸಲಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಖಾತ್ರೆ ಯೋಜನೆ, ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮ, ರಾಷ್ಟ್ರೀಯ ಕುಡಿಯುವ ನೀರಿನ ಕಾರ್ಯಕ್ರಮ, ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮ ಸೇರಿದಂತೆ ಒಟ್ಟು ಹತ್ತು ಯೋಜನೆಗಳ ಪ್ರಗತಿ ಪರಿಶೀಲನೆ ಬಗ್ಗೆ ಸಿಎಂ ಬಿಎಸ್ ವೈ ಸಭೆ ನಡೆಸಲಿದ್ದಾರೆ.

The post ರಾಜ್ಯದಲ್ಲಿ ಮುಂಗಾರು ಅಬ್ಬರ -ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಬಿಎಸ್​​​ವೈ ಸಭೆ appeared first on News First Kannada.

Source: newsfirstlive.com

Source link