ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಮುಂದುವರಿದಿದೆ. 24 ಗಂಟೆಯ ಮಳೆಯ ವಿವರ ನೋಡೋದಾದ್ರೆ, ಒಟ್ಟು 87 ಮಿಲಿ ಮೀಟರ್ ಸರಾಸರಿ ಮಳೆಯಾಗಿದೆ. ಬೈಂದೂರು ತಾಲೂಕಿನಲ್ಲಿ ಹೆಚ್ಚು ಮಳೆಯಗಿದ್ದು, 102 ಮಿಲಿಮೀಟರ್​ನಷ್ಟು ಮಳೆಯಾಗಿದೆ. ಬ್ರಹ್ಮಾವರದಲ್ಲಿ 93 ಮಿ.ಮೀ, ಕಾಪು 94, ಕುಂದಾಪುರ 86 ಕಾರ್ಕಳ 83 ಮಿ.ಮೀ, ಹೆಬ್ರಿ 53 ಮಿಲಿ ಮೀಟರ್ ಮಳೆ ದಾಖಲಾಗಿದೆ.

ಸದ್ಯ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್​ ವಿಸ್ತರಣೆ ಮಾಡಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುತ್ತೆ ಅನ್ನ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನ ನೀಡಲಾಗಿದೆ.

ಉಡುಪಿ ಮಾತ್ರವಲ್ಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ.

The post ರಾಜ್ಯದಲ್ಲಿ ಮುಂಗಾರು ಆರ್ಭಟ.. ಉಡುಪಿಯಲ್ಲಿ ಇಂದು ಅಧಿಕ ಮಳೆ appeared first on News First Kannada.

Source: newsfirstlive.com

Source link