ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ 18ರವರೆಗೆ ವ್ಯಾಪಕ ಮಳೆಯಾಗಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 20 ಸೆಂಟಿಮೀಟರ್​​ಗೂ ಹೆಚ್ಚು ಮಳೆಯಾಗೋ ನಿರೀಕ್ಷೆಯಿದೆ. ಈ ಹಿನ್ನೆಲೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲೂ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

The post ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ -ಹವಾಮಾನ ಇಲಾಖೆ ಮುನ್ಸೂಚನೆ appeared first on News First Kannada.

Source: newsfirstlive.com

Source link