ಬೆಂಗಳೂರು: ಸದ್ಯ ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ ಅಂತಾ ಸಚಿವ ಸಿಪಿ ಯೋಗೇಶ್ವರ್​ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯೋಗೇಶ್ವರ್​.. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದೆ. ನಮ್ಮ ಸರ್ಕಾರ ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಪಕ್ಷದ ಕೆಲವು ಸ್ನೇಹಿತರು ನನ್ನ ಬಗ್ಗೆ ಮಾತಾಡ್ತಿರೋದು ಗೊತ್ತು. ಅದನ್ನ ಯಾರು ಮಾತಾಡಿಸ್ತಿರೋದು ಅಂತಲೂ ಗೊತ್ತು. ಯಾರ ಕುಮ್ಮಕ್ಕು ಇದೆ ಅಂತಲೂ ಗೊತ್ತು ಎಂದು ಹರಿಹಾಯ್ದರು.

ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಕ್ಕಾಗಲ್ಲ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ. ಮುಖ್ಯಮಂತ್ರಿಗಳ ಬದಲಾವಣೆ ನನ್ನ ಮೂಲ ಉದ್ದೇಶ ಅಲ್ಲ. ಅಷ್ಟೊಂದು ಶಕ್ತಿ ನನಗೆ ಇಲ್ಲ. ಆ ಅಭಿಪ್ರಾಯವೂ ನನಗೆ ಇಲ್ಲ. ನಾನು ದೆಹಲಿಗೆ ಬೆಳಗ್ಗೆ ಹೋದೆ, ಸಂಜೆ ಬಂದೆ. ನನ್ನ ದೆಹಲಿ ಭೇಟಿ ಯಾಕೆ ಇಷ್ಟೊಂದು ಸುದ್ದಿಯಾಯ್ತೋ ಗೊತ್ತಿಲ್ಲ. ನನ್ನ ವಿಚಾರ ಎಲ್ಲಿ ಹೇಳ್ಬೇಕೋ ಅಲ್ಲಿ ಹೇಳ್ತೀನಿ. ಅರವಿಂದ ಬೆಲ್ಲದ ಯಾಕೆ ದೆಹಲಿಗೆ ಹೋಗಿದ್ರೋ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

The post ‘ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರವಾಗಿ ಉಳಿದಿಲ್ಲ, ಇದು ಮೂರು ಪಕ್ಷಗಳ ಸರ್ಕಾರ’ appeared first on News First Kannada.

Source: newsfirstlive.com

Source link